ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮಕ್ಕೆ ಚಾಲನೆ, ವಿವಿಧ ಸಚಿವರು ಭಾಗಿ
ಸತ್ಯಕಾಮ ವಾರ್ತೆ ರಾಯಚೂರು:-
ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ. ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅವರು ಅ.05ರ ಶನಿವಾರದ ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದ ವತಿಯಿಂದ ಗೋಕಾಕ್ ಚಳವಳಿಯ ಹಿನ್ನೋಟ-ಮುನ್ನೋಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
- Advertisement -
ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು. ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ. ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು, ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.
ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು.
ಗೋಕಾಕ್ ಚಳವಳಿಯು ಕರ್ನಾಟಕದಲ್ಲಿ ಭಾಷಾ ಚಳವಳಿ, ಕನ್ನಡ ಚಳವಳಿ ಆಗಿದೆ. ನಾನು ಯಾವ ಭಾಷೆಗೂ ವಿರೋಧವಿಲ್ಲ. ಮಾತೃಭಾಷೆ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೆ. ಮಾತೃಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡ ವಾತಾವರಣ ಸೃಷ್ಟಿ ಮಾಡಬೇಕಾಗಿದೆ. ರಾಯಚೂರಿನಲ್ಲಿ ಕರ್ನಾಟಕ ಸಂಭ್ರಮ- 50ರ ಅಂಗವಾಗಿ ಗೋಕಾಕ್ ಚಳವಳಿ ಹಿನ್ನೋಟ- ಮುನ್ನೋಟ ಸಮಾರಂಭ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಅತ್ಯಂತ ಸಂತೋಷದಿAದ ಭಾಗಿಯಾಗಿ ಉದ್ಘಾಟನೆ ಮಾಡಿದ್ದೇನೆಂದು ಹೇಳಿದರು.
- Advertisement -
ಆಂಧ್ರ- ತೆಲಂಗಾಣದ ಪಕ್ಕದ ಜಿಲ್ಲೆ ರಾಯಚೂರು ಈ ಭಾಗದಲ್ಲಿ ಸ್ವಲ್ಪ ತೆಲುಗು, ಉರ್ದು ಭಾಷೆ ಪ್ರಭಾವ ಇದೆ. ಸ್ವಾಭಾವಿಕವಾಗಿ ತೆಲುಗು ಭಾಷೆ ಇರುವುದು ಸಹಜ ಕರ್ನಾಟಕ ಏಕೀಕರಣ ಆದ ಬಳಿಕ ಬೇರೆಬೇರೆ ರಾಜ್ಯದಲ್ಲಿ ಸೇರಿದ ಕನ್ನಡ ಮಾತನಾಡುವ ಜನರು ಒಂದೇ ರಾಜ್ಯದಲ್ಲಿ ಸೇರಬೇಕೆಂದು 1956, ನವಂಬರ್ 1ರಲ್ಲಿ ಕರ್ನಾಟಕ ಏಕೀಕರಣ ಆಯ್ತು ಅಲ್ಲದೆ ಮೊದಲು ಮೈಸೂರು ರಾಜ್ಯ ಅಂತಹ ನಾಮಕರಣ ಇತ್ತು ಇದನ್ನು 1973ರಲ್ಲಿ ಮೈಸೂರು ರಾಜ್ಯವನ್ನ ಕರ್ನಾಟಕ ಅಂತ ನಾಮಕರಣ ಮಾಡಲಾಯಿತು. ಇಂದು 50 ವರ್ಷ ತುಂಬಿ, 51ನೇ ವರ್ಷದಲ್ಲಿ ನಾವು ಇದ್ದೇವೆ. 2024ರ ನವಂಬರ್ 1ರಂದು ಸಮಾರೋಪ ಸಮಾರಂಭ ಮಾಡಬೇಕು. ಅದಕ್ಕಾಗಿ ರಾಜ್ಯದ ಮೈಸೂರು,ಬೆಳಗಾವಿ, ರಾಯಚೂರು, ಮಂಗಳೂರಿನಲ್ಲಿ ಕರ್ನಾಟಕ ಹೆಸರಾಯ್ತು, ಕನ್ನಡ ನಮ್ಮೆಲ್ಲರ ಉಸಿರಾಗಲಿ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗ ನಾನು ಆಯ್ಕೆಯಾಗಿದೆ. ಆಗ ರಾಜ್ಯದ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರು ಆಗಿದ್ರೂ ನಾನು ಮೊದಲ ಬಾರಿಗೆ ಶಾಸಕನಾಗಿದೆ. ನಿಮಗೆ ಕನ್ನಡ ಬಗ್ಗೆ ಅಭಿವೃದ್ಧಿ ಇದೆ ಅಂತಹ ಅದಕ್ಕಾಗಿ ನನಗೆ ಕನ್ನಡ ಕಾವಲು ಸಮಿತಿ ಅಧ್ಯಕ್ಷ ಮಾಡಿದ್ರು ಆ ಬಳಿಕ ನಾನು 1984ರಲ್ಲಿ ರೇಷ್ಮೆ ಸಚಿವ ಆಗಿದೆ. ಯಾವುದೇ ರಾಜ್ಯದಲ್ಲಿ ಭಾಷೆ ಕಾಯಲು ಕಾವಲು ಸಮಿತಿ ಇಲ್ಲ. ಗೋಕಾಕ್ ಚಳವಳಿಯಲ್ಲಿ ರಾಜಕುಮಾರ್ ಹೋರಾಟಕ್ಕೆ ಇಳಿದಾಗ ಗೋಕಾಕ್ ಚಳವಳಿಗೆ ವೇಗ ಸಿಕ್ಕಿತ್ತು. ಉದಾರಿತನ ಇರಬೇಕು, ಆದ್ರೆ ಮಾತೃಭಾಷೆಗೆ ದಕ್ಕೆ ಆಗಬಾರದು. ಕರ್ನಾಟಕದಲ್ಲಿ ವಾಸ ಮಾಡುವರು ಕನ್ನಡ ಮಾತನಾಡಬೇಕು. ಬೇರೆ ರಾಜ್ಯದವರೊಂದಿಗೆ ಅವರ ಭಾಷೆಯಲ್ಲಿ ಮಾತನಾಡಬಾರದು. ಕನ್ನಡದಲ್ಲಿ ಮಾತನಾಡಿ ಅವರಿಗೂ ಕನ್ನಡ ಕಲಿಸಿ. ಕನ್ನಡ ಗಟ್ಟಿಯಾಗಿ ಉಳಿಯಬೇಕು, ಬೆಳೆಯಬೇಕು. ಅದಕ್ಕಾಗಿ ಒಂದು ವರ್ಷ ಇಂತಹ ಕಾರ್ಯಕ್ರಮ ಮಾಡುತ್ತಿದ್ದೇವೆ. ನವಂಬರ್ 1ರ ಒಳಗಾಗಿ ವಿಧಾನಸೌಧ ಮುಂದೆ ಭುವನೇಶ್ವರಿ ಕಂಚಿನ ಪ್ರತಿಮೆ ಉದ್ಘಾಟನೆ ಮಾಡುತ್ತೇವೆ ಮುಖ್ಯಮಂತ್ರಿಗಳು ಹೇಳಿದರು.
- Advertisement -
ಈ ವೇಳೆ ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಶಿವರಾಜ್ ತಂಗಡಗಿ ಅವರು ಮಾತನಾಡಿ, ಹೆಸರಾಯ್ತು ಕರ್ನಾಟಕ, ಉಸಿರಾಯ್ತು ಕನ್ನಡ ಎಂಬ ಕಾರ್ಯಕ್ರಮದಡಿ ಈ ವರ್ಷ ನವಂಬರ್ 1ರೊಳಗಾಗಿ ನಾಲ್ಕು ಕಾರ್ಯಕ್ರಮ ಮಾಡಲು ಚಿಂತನೆ ಮಾಡಿದ್ದೇವೆ. ಮೊದಲ ಕಾರ್ಯಕ್ರಮ ಮೈಸೂರಿನಿಂದ ಮಾಡಲಾಗಿದೆ. ಮೈಸೂರಿನಲ್ಲಿ 15 ಗೋಷ್ಠಿಗಳು ಮಾಡಿಲಾಯಿತು. ಮಹಾರಾಷ್ಟçದ ಗಡಿ ಭಾಗದಲ್ಲಿ ಯಶ್ವಸಿ ಕನ್ನಡ ಕಾರ್ಯಕ್ರಮ ಮಾಡಿಲಾಗಿದ್ದು, ರಾಯಚೂರಿನ ಕಾರ್ಯಕ್ರಮವು ಮೂರನೇ ಕಾರ್ಯಕ್ರಮವಾಗಿದೆ. ಕಲ್ಯಾಣ ಕರ್ನಾಟಕದ ಗಡಿ ಭಾಗವಾದ ರಾಯಚೂರಿನಲ್ಲಿ ಮಾಡಲು ತೀರ್ಮಾನ ಮಾಡಿ, ಮಾಡುತ್ತಿದ್ದೇವೆ ಎಂದರು.
ಮುಖಮಂತ್ರಿ ಸಿದ್ದರಾಮಯ್ಯ ಅವರು ಸಹಿ ಕನ್ನಡದಲ್ಲಿ ಇದೆ. ಕಡತಗಳು ಸಹ ಕನ್ನಡದಲ್ಲಿ ಮಾಡಬೇಕು. ಅಂತ ಸಿಎಂ ಅವರು ಆದೇಶ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರು ಇಡಬೇಕೆಂದರು. ನ.1ರೊಳಗಾಗಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಮಾಡಲು ಹೇಳಿದ್ದು, ಸಿಎಂ ಸಿದ್ದರಾಮಯ್ಯ ಅವರು ಅಲ್ಲದೆ ವಿಧಾನಸೌಧದಲ್ಲಿ ನಮಗೆ ಸಂಧಿ, ವ್ಯಾಕರಣದ ಬಗ್ಗೆ ತಿಳಿಸುತ್ತಾರೆ. ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ ಎಂದು ಹೇಳಿದರು.
ಮಾನವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ; ಜಿಲ್ಲೆಯ ಮಾನವಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಇಂದು ಮುಖಮಂತ್ರಿಗಳಾದ ಶ್ರೀಸಿದ್ದರಾಮಯ್ಯ ಅವರಿಂದ ಚಾಲನೆ ನೀಡಲಾಯಿತು.
ಈ ವೇಳೆ ಜನ ಸಾಗರದ ಸಾಕ್ಷಿಯಾಯಿತು. ಸುಮಾರು 3ಕಿಮೀ ಉದ್ದದ ರಸ್ತೆಯುದ್ದಕ್ಕೂ ಸೇರಿರುವ ಜನ. ಮಾತ್ರವಲ್ಲದೆ ಬೃಹತ್ ವೇದಿಕೆ ಮುಂಭಾಗದಲ್ಲಿ 40ಸಾವಿರಕ್ಕೂ ಅಧಿಕ ಮಂದಿ ಜಮೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಮುಗಿಲು ಮುಟ್ಟುವ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಾಹದೇವಪ್ಪ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಬಸವನಗೌಡ ತರ್ವಿಹಾಳ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಬಸನಗೌಡ ಬಾದರ್ಲಿ,ಶರಣಗೌಡ ಬಯ್ಯಾಪೂರು, ಚಂದ್ರಶೇಖರ ಪಾಟೀಲ್, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ರಾಜಶೇಖರ ರಾಮಸ್ವಾಮಿ, ಮಲ್ಲಿಕಾರ್ಜುನ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಸಂತೋಷ ಹಾನಗಲ್, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
*******
ಗೋಕಾಕ್ ಚಳವಳಿಯ ಹಿನ್ನೋಟ-ಮುನ್ನೋಟ ಕಾರ್ಯಕ್ರಮ; ಕಲಾ ತಂಡಗಳ ಮೆರವಣಿಗೆ ಚಾಲನೆ
ರಾಯಚೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದ ವತಿಯಿಂದ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಅಂಗವಾಗಿ ಇಂದು ನಗರದ ಬಸವೇಶ್ವರ ವೃತ್ತದಲ್ಲಿ ಈ ವೇಳೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ವಿವಿಧ ಕಲಾ ತಂಡಗಳ ಮೆರೆವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಸಂತೋಷ ಹಾನಗಲ್, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
*******

