ಸತ್ಯಕಾಮ ವಾರ್ತೆ ವಡಗೇರಾ:
ತಾಲೂಕಿನ ಬೀರನಕಲ್ ತಾಂಡದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಗೌರವಾನ್ವಿತ ಕೆ. ಮರಿಯಪ್ಪ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಮಾಜಿಕ ಹೋರಾಟಗಾರ್ತಿ ರುದ್ರಾಂಬಿಕ ಆರ್ .ಪಾಟೀಲ್ .ಚಟ್ನಳ್ಳಿ ರವರು ಮೇಲ್ಚಾವಣಿ ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಪತ್ರಿಕೆ ಹೇಳಿಕೆ ಮೂಲಕ ಮನವಿ ಮಾಡಿಕೊಂಡಿದ್ದರು. ಶುಕ್ರವಾರ ಭೇಟಿ ನೀಡಿದ ನ್ಯಾಯಾಧೀಶರು ಬಿಸಿ ಊಟದ ವ್ಯವಸ್ಥೆ ಶಾಲಾ ಕೊಣೆ ಶೌಚಾಲಯ ಹಾಗೂ ಕುಡಿಯುವ ನೀರಿನ ಪೂರೈಕೆ ಕುರಿತು ಮಾಹಿತಿ ಪಡೆದರು ಬಿಸಿ ಊಟಕ್ಕೆ ಸಂಬಂಧಿಸಿದಂತೆ ಸ್ವಚ್ಛತೆ ಕಾಪಾಡಿಕೊಳ್ಳಲು ಸಿಬ್ಬಂದಿಗಳಿಗೆ ಹೇಳಿದರು.
ವಿದ್ಯಾರ್ಥಿಗಳೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ ಕೊಡುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
- Advertisement -

