ಸತ್ಯಕಾಮ ವಾರ್ತೆ ವಡಗೇರಾ:
ರಾಯಚೂರು ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿತವಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣ ಘೋಷಣೆ ಮಾಡಿದ್ದು ಹಾಗೂ ಎಸ್ ಟಿ ವಸತಿ ಶಾಲೆಗಳಿಗೆ ವಾಲ್ಮೀಕಿ ಹೆಸರಿಡುವುದಾಗಿ ತಿಳಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರಕ್ಕೆ ಕಾಂಗ್ರೆಸ್ ಮುಖಂಡ ಹಾಗೂ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರಾದ ಬಸವರಾಜ ನೀಲಹಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮಾಜ ಹಾಗೂ ಈ ಭಾಗದ ಜನರ ಆಶಯದಂತೆ ಈ ನಾಮಕರಣ ಮಾಡಿರುವುದಾಗಿ ತಿಳಿಸಿದ್ದು. ನಮಗೆಲ್ಲಾ ಸಂತಸ ತಂದಿದೆ ಮಹರ್ಷಿ ವಾಲ್ಮೀಕಿ ರವರು ರಾಮಾಯಣದಂತ ಮಹಾಕಾವ್ಯ ಬರೆದು ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಅವರು ಸತ್ಯ ಸ್ಮರಣೀಯರು ಮಹಾನ್ ಶರಣರು ಅವರ ಆದರ್ಶಗಳು ಚಿರಕಾಲ ಉಳಿಯಲಿ ಮಕ್ಕಳಿಗೆ ದಾರಿದೀಪವಾಗಲಿ ಎಂಬ ಉದ್ದೇಶದಿಂದ ರಾಯಚೂರಿನ ವಿವಿಯನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನಾಗಿ ನಾಮಕರಣ ಮಾಡಿದ್ದಾಗಿ ನುಡಿದ ಅವರು ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡುವಲ್ಲಿ ಹಗಲಿರುಳು ಶ್ರಮಿಸಿದಂತ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ, ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸರಕಾರಕ್ಕೂ ವಾಲ್ಮೀಕಿ ಸಮಾಜದ ವತಿಯಿಂದ ಅಭಿನಂದನೆ ತಿಳಿಸಿದ್ದಾರೆ.

