ಸತ್ಯಕಾಮ ವಾರ್ತೆ ರಾಯಚೂರು:
ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ವಿಮಾನ ನಿಲ್ದಾಣದ ಕನಸಿಗೆ ಈಗ ನನಸಾಗಿದೆ ಹಲವಾರು ತೊಡಕುಗಳಿದ್ದ ಕಾರಣ ಈವರೆಗೆ ಸೈಟ್ ಕ್ಲಿಯರೆನ್ಸ್ ಸಿಕ್ಕಿರಲಿಲ್ಲ. ಈಗ ಅದು ದೊರೆತಿರುವುದು ಸಂತಸದ ಸಂಗತಿ ಎಂದು ರಾಯಚೂರು-ಯಾದಗಿರಿ ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ್ ಅವರು ಹೇಳಿದರು.
ಬಹುದಿನದ ಬೇಡಿಕೆಯಾದ ರಾಯಚೂರಿನ ವಿಮಾನ ನಿಲ್ದಾಣಕ್ಕೆ ಕೇಂದ್ರದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಗುರವಾರ ರಾಯಚೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಸಂಬಂಧ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ರಾಮ ಮೋಹನ್ ನಾಯ್ಡು ಅವರನ್ನು ಎರಡು ಬಾರಿ ಭೇಟಿಯಾಗಿ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆ. ಇದರ ಪರಿಣಾಮವಾಗಿ ಇಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಅವರಿಂದ ಸೈಟ್ ಕ್ಲಿಯರೆನ್ಸ್ ಬಗ್ಗೆ ದಾಖಲೆಗಳನ್ನು ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
- Advertisement -

