ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಜಾತ್ರಾ
ಮಹೋತ್ಸವ ಪ್ರಯುಕ್ತ ಶ್ರಾವಣ ಮಾಸದ ಅವದಿಗೆ ತೆಂಗಿನ ಬಹಿರಂಗ ಹರಾಜು ಪ್ರಕ್ರಿಯೆ ಜುಲೈ 27 ರಂದು ಮಧ್ಯಾಹ್ನ 1
ಗಂಟೆಗೆ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ.
ಇಚ್ಛೆವುಳ್ಳ ಸಾರ್ವಜನಿಕರು, ವ್ಯಾಪಾರಸ್ಥರು, ಹೋಲಸೇಲ್ ಅಂಗಡಿದಾರರು ಭಾಗವಹಿಸಬೇಕೆಂದು ಕೋರಲಾಗಿದೆ.

