ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ
ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲಿ ಸಮ್ಮೇಳನಕ್ಕೆ ದಿನಾಂಕ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯಾಧ್ಯಕ್ಷರಾದ ಎ.ಸಿ. ತಿಪ್ಪೇಸ್ವಾಮಿ ಅವರು ಮಾತನಾಡಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ, ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು ಮತ್ತು ಮಾಲೀಕರ ಸಂಘವು ನಮ್ಮದಾಗಿದೆ. ರಾಜ್ಯಾದ್ಯಂತ ನಮ್ಮ ಸಂಘದ ಜಿಲ್ಲಾ ಘಟಕಗಳು ಪತ್ರಿಕೆಗಳ ಅಭಿವೃದ್ಧಿ ಮತ್ತು ಬೆಳವಣಿಗೆಗೆ ತಮ್ಮ ನೇತೃತ್ವದ ಸರ್ಕಾರದ ವತಿಯಿಂದ ನೀಡಿದ ಮತ್ತು ನೀಡುತ್ತಿರುವ ಎಲ್ಲಾ ರೀತಿಯ ಸಹಕಾರವನ್ನು ಸ್ಮರಿಸುತ್ತಿವೆ. ನಮ್ಮ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ನಡೆಯಲಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಹೆಚ್.ಕೆ. ಪಾಟೀಲ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದರು.
ಈ ಸಮ್ಮೇಳನದಲ್ಲಿ ರಾಜ್ಯಾದ್ಯಂತ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು, ಉಪ ಸಂಪಾದಕರು, ಪ್ರಧಾನ ಸಂಪಾದಕರು, ವ್ಯವಸ್ಥಾಪಕ ಸಂಪಾದಕರು, ಆವೃತ್ತಿಗಳ ಸಂಪಾದಕರು ಭಾಗವಹಿಸಲಿದ್ದಾರೆ ಎಂದರು.
- Advertisement -
ಈ ಸಮ್ಮೇಳನದಲ್ಲಿ ಮಾಧ್ಯಮ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಿಕಾ ಸಂಪಾದಕರಿಗೆ ಮತ್ತು ಪತ್ರಿಕಾ ವಿತರಕರಿಗೆ ಮತ್ತು ಸಂಪಾದಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಈ ಸಮ್ಮೇಳನದಲ್ಲಿ ಸುಮಾರು ಎರಡು ಸಾವಿರಕ್ಕೂ ಮೇಲ್ಪಟ್ಟು ಪತ್ರಿಕಾ ಸಂಪಾದಕರು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜುನಾಥ ಬಸಪ್ಪ ಅಬ್ಬಿಗೇರಿ, ಪ್ರಧಾನ ಕಾರ್ಯದರ್ಶಿಗಳಾದ ಚನ್ನ ಬಸವ, ಖಜಾಂಚಿ ಖಾನ್ ಸಾಬ್ ಮೆಮೂನ್, ಕಾರ್ಯದರ್ಶಿಗಳಾದ ವಿ.ಅನೂಪ್ ಕುಮಾರ್, ಸಹ ಕಾರ್ಯದರ್ಶಿ ಡಾ.ಕೆ.ಎಸ್ ಸ್ವಾಮಿ, ಸೇರಿದಂತೆ ಮತ್ತಿತರರು ಇದ್ದರು.

