*ಸತ್ಯಕಾಮ ವಾರ್ತೆ ಬೆಂಗಳೂರು*
ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಕೊನೆಯುಸಿರೆಳಿದಿದ್ದಾರೆ.ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಅವರು,ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಈವರೆಗೆ ನಾಲ್ಕು ಶಾಸಕರಾಗಿದ್ದರು.
2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದ್ರೆ, ಹೈಕಮಾಂಡ್ ರಾಜಾ ವೆಂಕಟಪ್ಪ ನಾಯಕ ಅವರಿಗೆ ಉಗ್ರಾಣ ನಿಗಮ ನೀಡಲಾಗಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
- Advertisement -

