ಸತ್ಯಕಾಮ ವಾರ್ತೆ ಯಾದಗಿರಿ:
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾರವರೊಂದಿಗೆ ಜಿಲ್ಲೆಯ ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆಯ ಸಂಬಂಧಪಟ್ಟಂತಹ ಇಲಾಖೆ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಸಂಸದ ಜಿ ಕುಮಾರ ನಾಯಕ ರೈತರು ಕೇವಲ ಕೃಷಿಗೆ ಸೀಮಿತವಾಗದೆ ರೈತರು ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯಗಳು ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡಿ ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ರೈತರ ಆರ್ಥಿಕತೆ ಹಾಗೂ ಬೆಳವಣಿಗೆಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಸೇರಿದಂತೆ ಜಿಲ್ಲೆಯ ಅನೇಕ ಅಧಿಕಾರಿಗಳು ಹಾಜರಿದ್ದರು.
- Advertisement -

