ಸತ್ಯಕಾಮ ವಾರ್ತೆ ರಾಯಚೂರು:
ಜಿಲ್ಲೆಯ ಜನರು ಅಭಿವೃದ್ಧಿಗಾಗಿ ಕೆಲಸ ಮಾಡುವ ಅವಕಾಶ ನೀಡಿದ್ದು ಜಿಲ್ಲೆಯಲ್ಲಿ ಜನಪರ ಸೇವೆಯನ್ನು ನೀಡಿಲು ಸಿದ್ದನಿದ್ದೇನೆ, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿರುವೆ ಎಂದು ಸಂಸದ ಜಿ ಕುಮಾರ್ ನಾಯಕ್ ಹೇಳಿದರು.
ನಗರದ ಎಪಿಎಂಸಿ ಆವರಣದಲ್ಲಿನ ರೈತ ಭವನದಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವತಿಯಿಂದ ಆಯೋಜಿಸಿದ್ದ ನೂತನ ಸಂಸದರಾದ ಜಿ ಕುಮಾರ ನಾಯಕ ಹಾಗೂ ವಿಧಾನಪರಿಷತ್ ಸದಸ್ಯರಾದ ಎಂ ವಸಂತ ಕುಮಾರವರಿಗೆ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು ಈ ಹಿಂದೆ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಕೂಡ ಸೇವೆಯನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಅನೇಕ ಕಡತಗಳ ಪರಿಶೀಲನೇಯ ಅನುಭವವಿದೆ ವಿಶೇಷವಾಗಿ ಈ ರಾಯಚೂರು ನನ್ನ ಕರ್ಮ ಭೂಮಿಯಾಗಿದ್ದು ಈ ಭಾಗದ ಸಂಪೂರ್ಣ ಅಭಿವೃದ್ಧಿ ನನ್ನ ಧ್ಯೇಯವಾಗಿದೆ ಎಂದರು.
- Advertisement -
ಈ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಸನಗೌಡ ದದ್ದಲ್ ರವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಪಾಟೀಲ ಇಟಗಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಕೆ ಶಾಂತಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಹಿಳಾ ಘಟಕದ ಅಧ್ಯಕ್ಷರು ಕಾರ್ಯಕರ್ತರು ಅಭಿಮಾನಿಗಳು ಸಾರ್ವಜನಿಕ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

