- ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಅಭಿಪ್ರಾಯ ಸಂಗ್ರಹ
ಸತ್ಯಕಾಮ ವಾರ್ತೆ ಯಾದಗಿರಿ:
ಮುಂಬರುವ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನ ಮಂತ್ರವನ್ನು ಜಪಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಗೊಳಿಸಿ, ಅತಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಹೇಳಿದರು.
- Advertisement -
ಶನಿವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್‌ನ ಹಿರಿಯ ಮುಖಂಡರೊಡನೆ ಸಭೆ ನಡೆಸಿ ಅವರು ಮಾತನಾಡಿದರು. ಬಳಿಕ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನಪೂರ್, ರಾಘವೇಂದ್ರ ಮಾನಸಗಲ್ ,ಡಾ ಭೀಮಣ್ಣ ಮೇಟಿ, ಸೇರಿದಂತೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಮಹಿಳಾ ಘಟಕದ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಮುಂಚೂಣಿ ಘಟಕದ ಅಧ್ಯಕ್ಷರುಗಳು ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು..

