ಸತ್ಯಕಾಮ ವಾರ್ತೆ ಯಾದಗಿರಿ:
ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಅಂಗವಾಗಿ ವರ್ಕ್ಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನ. 21ರಂದು ಬಿಜೆಪಿ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ತಹಶೀಲ್ದಾರ ಕಚೇರಿಗಳ ಮುಂದೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ರಾಚಣ್ಣಗೌಡ ಮುದ್ನಾಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠ ಮಂದಿ ರ ಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಬೆಳಿಗ್ಗೆಯಿಂದ ಸಂಜೆ ತನಕ ವೇದಿಕೆಗೆ ಬರಮಾಡಿಕೊಂಡು ಅಹ ವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಪರಾಮರ್ಶೆ ಮಾಡುತ್ತೇವೆ ಎಂದರು.
ಈಗಾಗಲೇ ಬಿಜೆಪಿ ಮೂರು ತಂಡಗಳನ್ನು ರಚಿಸಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ರೈತರು, ಸಾರ್ವಜನಿಕರ ಸಮಸ್ಯೆಗ ಳನ್ನು ಆಲಿಸಲಿದೆ. ಅವರ ಸಮಸ್ಯೆಗಳನ್ನು ಮುಂಬರುವ ಬೆಳಗಾವಿ ಅಧಿವೇಶದಲ್ಲಿ ಪ್ರಸ್ತಾಪಿ ಸಲಿದ್ದಾರೆ ಎಂದರು.
- Advertisement -
ಕೇಂದ್ರ ಸಚಿವರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಡಿ.ವಿ. ಸದಾನಂದಗೌಡ, ಬಸವರಾಜ ಬೊಮಾಯಿ, ಜಗದೀಶ ಶೆಟ್ಟರ್ ಪ್ರಮುಖ ನಾಯಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.ವಕ್ಪ್ ಆಸ್ತಿ ಸಂಬಂಧ ಇಡೀ ರಾಜ್ಯ ದಲ್ಲಿ ಸಮಸ್ಯೆ ಎದುರಾಗಿದ್ದು, ಆ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದೇವಿಂದ್ರನಾಥ ನಾದ, ಮಹೇಶ ರೆಡ್ಡಿ ಮುನ್ನಾಳ, ಜಿಲ್ಲಾ ವಕ್ತಾರ ಮತ್ತು ನಗರಸಭೆ ಸದಸ್ಯ ಹಣಮಂತ ಇಟಗಿ, ಸಿದ್ದನಗೌಡ ಕಾಡಂನೋರ, ಚಂದ್ರಶೇಖರ ಕಡೇಸೂರ ಸೇರಿದಂತೆ ಇತರರಿದ್ದರು.

