ಸತ್ಯಕಾಮ ವಾರ್ತೆ ಗುರುಮಠಕಲ್ :
ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಖಂಡೇಶ್ವರ ಹಿರೇಮಠ ಹೇಳಿದರು.
ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನಕ್ಕೆ ಸಾಥ್ ನೀಡಿ ಮಾತನಾಡಿದ ಅವರು, 1995 ರ ನಂತರ ಆರಂಭವಾದ ಖಾಸಗಿ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಅನೇಕ ವರ್ಷಗಳಿಂದ ಬೇಡಿಕೆ ಇದೆ. ಆದರೆ, ಸರ್ಕಾರಗಳು ಇದಕ್ಕೆ ಮನ್ನಣೆ ನೀಡಿಲ್ಲ.
- Advertisement -
ದಶಕಗಳ ಕಾಲ ಪಾಠ ಮಾಡಿದ ಶಿಕ್ಷಕರು ಅನುದಾನದ ವೇತನ ಇಲ್ಲದೆ ನಿವೃತ್ತರಾಗಿದ್ದಾರೆ.ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ, ಆರ್‌ಟಿಇ ಶುಲ್ಕ ಮರುಪಾವತಿ, ಗ್ರಾಚ್ಯುಟಿ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಇತ್ಯಾರ್ಥವಾಗಬೇಕಾಗಿದೆ ಎಂದರು.

