Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Districts Yadgir | Politics News

ಸರ್ಕಾರದ ಬಳಿ ಅಭಿವೃದ್ಧಿಗೆ ಅನುದಾನವಿಲ್ಲ: ಶಾಸಕ ಶರಣಗೌಡ ಕಂದಕೂರ

ಯಾದಗಿರಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನವಿಲ್ಲ. ನೌಕರರ ವೇತನ ಪಾವತಿಗೂ ಹಣದ ಕೊರತೆ ಎದುರಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಸೇರಿದಂತೆ ವಿವಿಧ ಯೋಜನೆಗಳಿಗೂ ಅನುದಾನದ ಅಭಾವವಿದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಆರೋಪಿಸಿದರು.

ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ, ಚುನಾವಣೆಗೆ ತೆರಳುವ ಮುನ್ನ ಸರ್ಕಾರ ತನ್ನ ಆರ್ಥಿಕ ಪರಿಸ್ಥಿತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಬೆಲೆ ಏರಿಕೆ ಹಾಗೂ ಜನರ ಮೇಲಿನ ಹೆಚ್ಚುತ್ತಿರುವ ಆರ್ಥಿಕ ಹೊರೆ ಮುಂಬರುವ ಚುನಾವಣೆಯಲ್ಲಿ ಜನರ ನಿರ್ಧಾರದ ಮೇಲೆ ಪರಿಣಾಮ ಬೀರುವ ವಿಚಾರಗಳಾಗಿವೆ ಎಂದು ಶರಣಗೌಡ ಕಂದಕೂರ ಹೇಳಿದರು.

Author
Kudhan Sab
ನಾನು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಸ್ತುತ ಸತ್ಯಕಾಮ ಪ್ರಾದೇಶಿಕ ಪತ್ರಿಕೆಯಲ್ಲಿ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು, ಜನಪರ ವಿಚಾರಗಳು, ಸ್ಥಳೀಯ ಸಮಸ್ಯೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಸುದ್ದಿಗಳನ್ನು ವಸ್ತುನಿಷ್ಠವಾಗಿ ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST