ಮುದ್ದೇಬಿಹಾಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆಯಲ್ಲಿ ಕುಮಾರಿ ಸುಸ್ಮಿತಾ ಬಿ. ಕುಂಬಾರ ದ್ವಿತೀಯ ಸ್ಥಾನ ಪಡೆದರೆ, ದ್ವಿತೀಯ ವರ್ಷದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಜ್ವಲ ಎನ್. ಹರಿಂದ್ರಾಳ ದ್ವಿತೀಯ ಸ್ಥಾನ ಗಳಿಸಿದ್ದಾರೆ. ದ್ವಿತೀಯ ವರ್ಷದ ಜಾನಪದ ಗಾಯನ ಸ್ಪರ್ಧೆಯಲ್ಲಿ ಪ್ರಜ್ವಲ ಎನ್. ಬಿರಾದಾರ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ನ. 19ರಂದು ಕೊಲ್ಹಾರ ಪಟ್ಟಣದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಹಾರ್ವರ್ಡ್ ಪಿಯು ಕಾಲೇಜಿನ ಅಧ್ಯಕ್ಷ ಎಸ್.ಎಂ. ನೆರಬೆಂಚಿ, ಪ್ರಾಂಶುಪಾಲೆ ಆರ್.ಬಿ. ರೂಡಗಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.