ಸತ್ಯಕಾಮ ವಾರ್ತೆ ಯಾದಗಿರಿ:
ಡಿ.14 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯುತ್ತಿದ್ದು, ಬಾಕಿ ಇರುವ ವ್ಯಾಜ್ಯಗಳನ್ನು ಸಾರ್ವಜನಿಕರು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಅವರು ಹೇಳಿದರು.
ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ನೆಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದರು.
- Advertisement -
ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾ ಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೊರತು ಪಡಿಸಿ) ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಇದುವರೆಗೆ ಜಿಲ್ಲೆಯ್ಯಾದಂತ ಒಟ್ಟು 19492 ಪ್ರಕರಣಗಳನ್ನು ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. 2661 ರಾಜೀ ಮಾಡಬಲ್ಲ ಪ್ರಕರಣಗಳೆಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಒಟ್ಟು 04 ಬೆಂಚ್ ಗಳನ್ನು, ಶಹಾಪೂರ 03 ಮತ್ತು ಸುರಪೂರದಲ್ಲಿ 02 ಬೆಂಚ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಬೆಂಚನಲ್ಲಿ ಒಬ್ಬರು ನ್ಯಾಯಾಧೀಶರು ಹಾಗೂ ಒಬ್ಬರು ವಕೀಲರು ಸಂಧಾನಕಾರರಾಗಿ ಭಾಗವಹಿಸುವರು, ಅವರ ಮುಖಾಂತರ ರಾಜೀ ಸಂಧಾನ ಮಾಡಿಸಲಾಗುವುದು ಎಂದು ಹೇಳಿದರು.
- Advertisement -
ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ಸಾಕಷ್ಟು ಸಮಯ ಮತ್ತು ಹಣ ಉಳಿತಾಯ ಮಾಡಬಹುದಾಗಿದೆ. ಸಿವಿಲ್ ಪ್ರಕರಣಗಳಲ್ಲಿ ರಾಜೀ ಆದರೆ ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕ ಸಹ ವಾಪಸ್ಸಾಗುತ್ತದೆ. ಮತ್ತು ಇದರಿಂದ ಉಭಯ ಪಕ್ಷಗಾರರಲ್ಲಿ ದ್ವೇಷದ ಭಾವನೆ ಕಡಿಮೆಯಾಗಿ ಸಾಮರಸ್ಯ ಮೂಡುತ್ತದೆ. ಸಾರ್ವಹನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

