ಸತ್ಯಕಾಮ ವಾರ್ತೆ ಯಾದಗಿರಿ:
ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿಧ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ಪಟ್ಟರು.
ಗುರುಮಿಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ ೨೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.
ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆ ಆದ್ಯತೆ ನೀಡುವ ಜೊತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿಧ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜೊತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.
ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ವಸತಿ ಶಾಲೆಯ ಶಿಕ್ಷಕರಿಗೆ ಸಂಬಳ ನೀಡಲಾಗುತ್ತಿದೆ, ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಶಾಲಾ ಕೋಣೆಗಳನ್ನು ಮಂಜೂರು ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರು, ಜಿಲ್ಲೆಯಲ್ಲಿ ೩ ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ ೨ ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.
- Advertisement -
ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿಧ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು,ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ ೩ ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.
ಈ ಹಿಂದೆ ಶಾಸಕರಾಗಿದ್ದ ನಮ್ಮ ತಂದೆ ದಿ. ನಾಗನಗೌಡ ಕಂದಕೂರ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು, ಅವರ ಜೊತೆಯಲ್ಲಿ ನಾನೂ ಕೂಡ ಜನರ ಹಾಗೂ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿದ ಪರಿಣಾಮ ನೀವೂ ನನ್ನನ್ನೂ ಶಾಸಕನಾಗಿ ಆಯ್ಕೆ ಮಾಡಿದ್ದೀರಿ, ಈ ಭಾಗದ ಹಳ್ಳಿಗಳ ಪ್ರಗತಿಗೆ ಆದ್ಯತೆ ಮೇರೆಗೆ ನಾನೂ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ವೇದಿಕೆ ಮೇಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷಿö್ಮ, ಪ್ರಾಂಶುಪಾಲೆ ರಮಾಭಾಯಿ, ಗುರುಮಿಠಕಲ್ ಪಟ್ಟಣ ಪಂಚಾಯತ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಗಿರಿನಾಥರಡ್ಡಿ ಚಿಂತಗುAಟಾ, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

